Latest

ಮತ್ತೊಂದು ಭೀಕರ ರಸ್ತೆ ಅಪಘಾತ; ಮೂವರು ಮಹಿಳೆಯರು ಬಲಿ

ಪ್ರಗತಿವಾಹಿನಿ ಸುದ್ದಿ; ತಿರುಪತಿ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದೆ.

ತಿರುಮಲದಿಂದ ಬರುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಕಾರಿನಲ್ಲಿದ್ದವರು ಬೆಂಗಳೂರು ಮೂಲದವರಾಗಿದ್ದು, ತಿರುಪತಿ ವೆಂಕಟೇಶ್ವರನ ದರ್ಶನ ಪಡೆದು ವಾಪಸ್ಸಾಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ಮಹಿಳೆಯರನ್ನು ರಾಧಮ್ಮ, ಅನ್ನಪೂರ್ಣ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button