ಪ್ರಗತಿವಾಹಿನಿ ಸುದ್ದಿ; ತುಮಕೂರು: ಕಾರು-ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ದಂಪತಿಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ.
ಹಾಸನ ಜಿಲ್ಲೆಯ ಅರಸಿಕೆರೆ ಮೂಲದ ರಘು (35) ಹಾಗೂ ಅನುಷಾ (28) ಮೃತ ದಂಪತಿಗಳು. ಒಂದುವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ರಘು ಹಾಗೂ ಅನುಷಾ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಸಂಬಂಧಿಕರ ಮನೆಯ ಮದುವೆಗೆಂದು ತೆರಳುತ್ತಿದ್ದಾಗ ಹುಳಿಯಾರ್ ಗೇಟ್ ಬಳಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಲಾರಿ ರಸ್ತೆ ಬದಿಯ ಮರಕ್ಕೆ ಹೋಗಿ ಡಿಕ್ಕಿ ಹೊಡೆದಿದೆ.
*ಭೀಕರ ಅಪಘಾತ; ಮೂವರು ಯುವಕರು ಬಲಿ*
https://pragati.taskdun.com/bike-accidentthree-youth-deathdavanagere/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ