Kannada NewsKarnataka NewsNational

*ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರ್: ಇಬ್ಬರ ಸಾವು*

ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಗುರುವಾರ ಸಂಜೆ ಗೌರಿಬಿದನೂರು ಕೈಗಾರಿಕಾ ಪ್ರದೇಶದ ಬಳಿ ಕಾರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಈಘಟನೆಯಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಸೂರಜ್ (27) ಹಾಗೂ ಕಮಲ್ (26) ಮೃತ ದುರ್ದೈವಿಗಳಾಗಿದ್ದು, ಮಿಕ್ಕ ನಾಲ್ವರನ್ನು ಗೌರಿಬಿದನೂರು ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ.

Home add -Advt

ಆರೂ ಜನರೂ ಸತ್ಯಸಾಯಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ವಾಪಸಾಗುವಾಗ ಅಪಘಾತ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗೌರಿಬಿದನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button