Kannada NewsKarnataka NewsNational

*ನಿಯಂತ್ರಣ ತಪ್ಪಿ ಮೂರು ಬಾರಿ ಪಲ್ಟಿ ಹೊಡೆದ ಕಾರು: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಮೂರು ಬಾರಿ ಪಲ್ಟಿಯಾಗಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ.‌

ಈ ಘಟನೆಯು ಮಹಾರಾಷ್ಟ್ರದ ಮುಂಬೈಯ ಚೆಂಬೂರಿನಲ್ಲಿ ನೆಡೆದಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಹರಿಚಂದನ್ ದಿಲೀಪ್ ದಾಸ್ (23), ಪ್ರಮೋದ್ ಶಂಕರ್ ಪ್ರಸಾದ್ (35) ಮತ್ತು ಹುಸೇನ್ ಶೇಖ್ (40) ಎಂದು ಗುರುತಿಸಲಾಗಿದೆ.

ಅಪಘಾತದ ಸಮಯದಲ್ಲಿ ಕಾರಿನ ಚಾಲಕ ಸೇರಿದಂತೆ ಉಳಿದವರೆಲ್ಲರೂ ಮದ್ಯದ ಅಮಲಿನಲ್ಲಿದ್ದರು ಎಂಬ ಶಂಕೆ ಮೂಡಿದೆ. ವಿಧಿ ವಿಜ್ಞಾನ ತಂಡ ಸ್ಥಳಕ್ಕೆ ಭೇಟಿ ನೀಡಿ, ರಕ್ತದ ಮಾದರಿಯುನ್ನು ಸಂಗ್ರಹಿಸಿದೆ. ತನಿಖೆಯ ಬಳಿಕ ಸಂಪೂರ್ಣ ಮಾಹಿತಿ ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Related Articles

Back to top button