Kannada NewsKarnataka NewsLatest

*ಅಂಬೇಡ್ಕರ್ ಜಯಂತಿ ವೇಳೆ ಜನರ ಗುಂಪಿಗೆ ನುಗ್ಗಿದ ಕಾರು: 7 ವರ್ಷದ ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ ಜಯಂತಿಯ ಮೆರವಣಿಗೆ ವೇಳೆ ಮದ್ಯ ವ್ಯಸನಿ ಕಾರು ಚಲಾಯಿಸಿದ ಪರಿಣಾಮ 7 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರಿಗೆ ಗಾಯವಾಗಿದೆ.

ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. 

7 ವರ್ಷದ ಮಗು ಸಾನ್ವಿ ಸಾವನ್ನಪ್ಪಿದೆ. ಅಪಘಾತದಲ್ಲಿ ನಿಶ್ಚಿತ (11), ತೃಪ್ತಿ (11), ತಿಮ್ಮರಾಜು (45), ಉಷಾ (22), ಸೃಷ್ಟಿ (18), ನಾಗರಾಜು (28), ಚೇತನ್ (16) ಸೇರಿದಂತೆ ಒಟ್ಟು 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಎಂಟು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ ಸುಧಾಕರ್ ಎಂಬುವವರಿಗೂ ಗಾಯಗಳಾಗಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ.

ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸುಧಾಕರ್‌ನನ್ನ ಹಿಡಿದು ಸ್ಥಳೀಯರು ಥಳಿಸಿದ್ದಾರೆ. ಅಪಘಾತದ ಬಳಿಕ ಕಾರಿನಲ್ಲಿದ್ದ ಮತ್ತೋರ್ವ ಎಸ್ಕೇಪ್ ಆಗಿದ್ದಾನೆ. 

ಕಾರು ಚಾಲಕನನ್ನ ಸ್ಥಳೀಯರು ಜಿಲ್ಲಾಸ್ಪತ್ರೆಗೆ ರವಾನಿಸಿದರು. ಕಾರಿನ ಗಾಜುಗಳನ್ನ ಪುಡಿ-ಪುಡಿ ಮಾಡಿದ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Back to top button