*ಕಾರು-ಟ್ರ್ಯಾಕ್ಟ‌ರ್ ಮಧ್ಯೆ ಅಪಘಾತ: ಸೇರಿ ನಾಲ್ವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಟ್ರ್ಯಾಕ್ಟ‌ರ್ ಹಾಗೂ ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನಲ್ಲಿ ನಡೆದಿದೆ.‌ ತಾಲೂಕಿನ ಶಿರಗುಪ್ಪಿ – ಕಾಗವಾಡ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯದಲ್ಲಿ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮಗು ಸೇರಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿವೆ. ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಕಾ‌ರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. … Continue reading *ಕಾರು-ಟ್ರ್ಯಾಕ್ಟ‌ರ್ ಮಧ್ಯೆ ಅಪಘಾತ: ಸೇರಿ ನಾಲ್ವರ ಸ್ಥಿತಿ ಗಂಭೀರ*