![](https://pragativahini.com/wp-content/uploads/2024/01/Accident-2-6.jpg)
ಪ್ರಗತಿವಾಹಿನಿ ಸುದ್ದಿ: ಕಾರು, ಟ್ರಕ್‍ಗೆ ಡಿಕ್ಕಿ ಹೊಡೆದು ಆರು ಜನ ಮೃತಪಟ್ಟರೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಾಪುರ್ ನಗರದ ಬಳಿಯ ದೆಹಲಿ- ಲಖನೌ ಹೆದ್ದಾರಿಯಲ್ಲಿ ಸಂಭವಿಸಿದೆ.
ಕಾರು ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಅನುಪಮ್, ಅಂಕಿತ್, ಜೀತು, ಶಂಕರ್, ಸಂದೀಪ್ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತ ವ್ಯಕ್ತಿಯ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಿಯಂತ್ರಣ ತಪ್ಪಿದ ಕಾರು ಮೊದಲು ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಬಳಿಕ ಎದುರಿಗೆ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಶಬ್ದ ಕೇಳಿದ ಸ್ಥಳೀಯರು ಕಾರಿನಲ್ಲಿ ಸಿಲುಕಿದ್ದ ಶವಗಳನ್ನು ಹೊರತೆಗೆದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ