Latest

*ಭೀಕರ ರಸ್ತೆ ಅಪಘಾತ; ಮಗು ಸೇರಿ 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸಾಲು ಸಾಲು ಅಪಘಾತ, ಅಗ್ನಿ ದುರಂತಗಳು ಸಂಭವಿಸಿದ್ದು, ಜನರನ್ನು ಕಂಗೆಡಿಸುತ್ತಿದೆ. ಬೆಳ್ಳಂಬೆಳಿಗ್ಗೆ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿ 6 ಜನರು ಸಾವನ್ನಪ್ಪಿದ್ದಾರೆ.

Home add -Advt

ಹಾಸನ ಜಿಲ್ಲೆಯ ಈಚನಹಳ್ಳಿ ಗ್ರಾಮದಲ್ಲಿ ಬೆಂಗಳೂರು-ಮಂಗಳುರು ಹೆದ್ದಾರಿ NH 75ರಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಮಗು ಚೇತನ್ ಹಾಗೂ ಕಾರು ಚಾಲಕ ರಾಕೇಶ್ ಎಂದು ಗುರುತಿಸಲಾಗಿದೆ.

ಅಪಘಾತಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನ ಒಳಗೆ ಸಿಲುಕಿದವರನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸ್ಥಳಕ್ಕೆ ಹಾಸನ ಎಸ್ ಪಿ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ.

Related Articles

Back to top button