*ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಡವಳಗಿಯಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಕಾರು ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ದೊಡ್ಡಯ್ಯ ಪುರಾಣಿಕಮಠ (37), ಪುಷ್ಪಾವತಿ ಹಿರೇಮಠ (55) ಮೃತ ದುರ್ದೈವಿಗಳು. ಮೃತರಿಬ್ಬರೂ ಬಸವನಬಾಗೇವಾಡಿ ತಾಲೂಕಿನ ಕರಭಂಟನಾಳ ಗ್ರಾಮದ ನಿವಾಸಿಗಳು. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಮುದ್ದೆಬಿಹಾಳ … Continue reading *ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*