ಪ್ರಗತಿವಾಹಿನಿ ಸುದ್ದಿ: ಕಾರು ಪಲ್ಟಿಯಾಗಿ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.
ಭೀಮ್ಲಾ ತಾಂಡಾದಲ್ಲಿ ವಾಸವಾಗಿದ್ದ ಕುಟುಂಬದ 7 ಜನರು ತೂಪ್ರಾಣಾದಿಂದ ವಾಪಾಸ್ ಅಗುತ್ತಿದ್ದ ವೇಳೆ ಚಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು ತುಂಬಿದ್ದ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಮಕ್ಕಳು ಸೇರಿ 7ಜನರು ಸಾವನ್ನಪ್ಪಿದ್ದಾರೆ.
ಶಿವಂಪೇಟೆ ಪೊಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೇದಕ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ