
ಪ್ರಗತಿವಾಹಿನಿ ಸುದ್ದಿ: ಕಾರೊಂದು ಪಲ್ಟಿಯಾಗಿ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ನಲ್ಲಿ ಈ ದುರಂತ ಸಂಭವಿಸ್ದೆ. ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಂದಕಕ್ಕೆ ಉರುಳಿ ಬಿದ್ದಿದೆ. ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನ ನಂಬರ್ ಪ್ಲೇಟ್ ಕೂಡ ಸುಟ್ಟು ಹೋಗಿದೆ. ಕಾರಿನಲ್ಲಿದ್ದ ಇಬ್ಬರು ಸಜೀವದಹನವಾಗಿದ್ದು, ಗುರುತು ಪತ್ತೆಯಾಗಿಲ್ಲ.
ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




