
ಪ್ರಗತಿವಾಹಿನಿ ಸುದ್ದಿ: ಎರಡು ದಿನಗಳ ಹಿಂದಷ್ಟೆ ಹಸೆಮಣೆಯೇರಿದ್ದ ನವವಿವಾಹಿತೆ ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿಯಲ್ಲಿ ನಡೆದಿದೆ.
ಮಾನಸ ಮೃತ ದುರ್ದೈವಿ. ಅಪಘಾತದಲ್ಲಿ ಮಾನಸ ಪತಿ ಅನೀಶ್ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾನಸ ಹಾಗೂ ಅನೀಶ್ ಕೃಷ್ಣ ಸೆ.5ರಂದು ವಿವಾಹವಾಗಿದ್ದರು.
ಇಂದು ಮಂಗಳೂರಿನತ್ತ ಕಾರಿನಲ್ಲಿ ತೆರಳುತ್ತಿದ್ದ ವೇಳೆ ತಲಪಾಡಿ ಬಳಿ ಕಾರು ಡಿವೈಡರ್ ಗೆ ಗುದ್ದಿ ಪಕ್ಕದ ರಸ್ತೆಗೆ ಹಾರಿ ಬಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಮಾನಸ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ