*ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಆಟೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಬೆಗುಸರಾಯ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ರತನ್ ಚೌಕ್ ಬಳಿ ಕಾರಿಗೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಸ್ಥಳದಲ್ಲೇ 6 ಜನರು ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. *ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ: … Continue reading *ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ 6 ಜನರು ದುರ್ಮರಣ*