Latest

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಜೈಲು, 1ಲಕ್ಷ ರೂ. ದಂಡ

ಪ್ರಗತಿವಾಹಿನಿ ಸುದ್ದಿ, ಕಾರವಾರ: ಆರು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿದೆ.

ಕುಮಟಾ ತಾಲೂಕಿನ ವನ್ನಳ್ಳಿಯ ಕಾಸಿಂ(28) ಶಿಕ್ಷೆಗೆ ಗುರಿಯಾದವ. ಈತ ಹಿಣಿ ಗ್ರಾಮದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ. ತಮ್ಮ ಪರಿಚಿತರೊಬ್ಬರ ಆರು ವರ್ಷದ ಮಗ ಆಟವಾಡುತ್ತಿದ್ದ ವೇಳೆ ಆತನಿಗೆ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದ.

Home add -Advt

ರಕ್ತಸ್ರಾವದಿಂದ ಬಳಲಿದ ಬಾಲಕನಿಗೆ ಪಾಲಕರು ವಿಚಾರಿಸಿದ ಘಟನೆಯ ಬಗ್ಗೆ ವಿವರಿಸಿದ್ದಾನೆ. ಈ ಕುರಿತು ಬಾಲಕನ ಹೆತ್ತವರು ಕುಮಟಾ ಪೊಲೀಸ್ ಠಾಣೆಯಲ್ಲಿ ಮಾರ್ಚ್ 15ರಂದು ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪಿಎಸ್ ಐ ನವೀನ್ ಆರೋಪಿಯನ್ನು ಬಂಧಿಸಿ ಸಾಕ್ಷ್ಯಾಧಾರಗಳೊಂದಿಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಕೈಗೊಂಡ ನ್ಯಾಯಾಲಯ ಆರೋಪಿಗೆ 20 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಗ್ರಾಮೀಣ ಮಕ್ಕಳಿಗೂ ಬಂತು ಡಿಜಿಟಲ್ ಲೈಬ್ರರಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟನೆ

Related Articles

Back to top button