ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಮೈಸೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 5 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರಿನ ಇಲವಾರ ಬಳಿಯ ಪೆಟ್ರೋಲ್ ಬಂಕ್ ಬಳಿ ತಂದೆ-ತಾಯಿ ಹಾಗೂ ಮಗು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕಾರು ಬೈಗ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ನಲ್ಲಿದ್ದ ತಾಯಿ ಹಾಗೂ ಮಗು ರಸ್ತೆಗೆ ಹಾರಿ ಬಿದ್ದಿದ್ದಾರೆ. ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ಲಿಖಿತ್ (5) ಮೃತ ಮಗು. ತಂದೆ-ತಾಯಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ