Kannada NewsKarnataka NewsLatest

*ಭೀಕರ ಅಪಘಾತ: KSRTC ಬಸ್-ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತಿಪುರದಲ್ಲಿ ಈ ದುರಂತ ಸಂಭವಿಸಿದೆ.

ಕಾರಿನಲ್ಲಿ ಆರು ಜನರು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ರಿಹಾನ್ (15), ರಾಹಿಲ್ (9) ಹಾಗೂ ಫಾತಿಮಾ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button