*ಭೀಕರ ಅಪಘಾತ: KSRTC ಬಸ್-ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತಿಪುರದಲ್ಲಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿ ಆರು ಜನರು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ರಿಹಾನ್ (15), ರಾಹಿಲ್ (9) ಹಾಗೂ ಫಾತಿಮಾ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Home add -Advt *ಸುವರ್ಣಸೌಧದಲ್ಲಿ ಜ.17 ರಂದು … Continue reading *ಭೀಕರ ಅಪಘಾತ: KSRTC ಬಸ್-ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ದುರ್ಮರಣ*