LatestUncategorized

*ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಶಿಕ್ಷಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಬಸ್ಸು ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿಕ್ಷಕರಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಹೇಬ್ರಿ ಬಳಿಯ ಸೀತಾನದಿ ಎಂಬಲ್ಲಿ ನಡೆದಿದೆ.

ಭೀಕರ ಅಪಘಾತದ ರಭಸಕ್ಕೆ ಆಲ್ಟೋ ಕಾರು ಬಸ್ ನ ಅಡಿಗೆ ನುಗ್ಗಿದೆ. ಸ್ಥಳದಲ್ಲೇ ಕಾರಿನಲ್ಲಿದ್ದ ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಉಡುಪಿ ಶಿಕ್ಷಣ ಇಲಾಖೆಯಕ ಸುಬ್ಬಣ್ಣ ಗಾಣಿಗ, ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ ಸೋಮಶೇಖರ್ ಮೃತರು. ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕ ಸುದರ್ಶನ್ ಹಾಗೂ ಕಾರು ಚಾಲಕ ಸತೀಶ್ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಆಗುಂಬೆ ಕಡೆ ಹೊರಟಿದ್ದ ಮಿನಿ ಬಸ್ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದವರು ಚೆನ್ನಗಿರಿಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗಿಯಾಗಿ ಉಡುಪಿಗೆ ಹೊರಟಿದ್ದರು ಎಂದು ತಿಳಿದುಬಂದಿದೆ.

Related Articles

Back to top button