Kannada NewsLatestNational

*ಕಾರು-ಡಂಪರ್ ನಡುವೆ ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ: ಮೂವರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಡಂಪರ್ ಟ್ರಕ್ ನಡುವೆ ಭೀಕರ ಅಪಘಾಅತ ಸಂಭವಿಸಿದ್ದು, ಡಿಕ್ಕಿ ವೇಳೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಜೀವದಹನವಾಗಿದ್ದಾರೆ.

ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಹಮೀರ್ವಾಸ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪಿಲಾನಿ-ಸಾದುಲ್‌ಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದ ಮಹೀಂದ್ರಾ ಬೊಲೆರೊ ತ್ರಿಪಾಲಿ ಟೋಲ್ ಪ್ಲಾಜಾ ಬಳಿ ಡಂಪರ್ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಎರಡೂ ವಾಹನಗಳಿಗೂ ಕ್ಷಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಐದು ಜನರನ್ನು ಪಿಲಾನಿಯ ಬಿರ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜೈಪುರದ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button