
ಜುಲೈ ೨೮ ರಿಂದ ವರ್ಚುವಲ್ ಸಂದರ್ಶನ: ವೆಬ್ ಸೈಟ್ ಮೂಲಕ ನೋಂದಣಿಗೆ ಅವಕಾಶ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜುಲೈ.೨೮ ರಿಂದ ವರ್ಚುವಲ್ ಸಂದರ್ಶನವನ್ನು (Virtual walkin interview) ಆಯೋಜಿಸಲಾಗಿದೆ.
ಪಿ.ಯು.ಸಿ. ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು https://www.sites.google.com/view/virtualwalkin ಈ ವೆಬ್ ಸೈಟ್ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಈ ವೆಬ್ ಸೈಟ್ ಮೂಲಕ ನೋಂದಾಯಿತ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು.
ಜುಲೈ.೨೭ರ ಸಾಯಂಕಾಲ ೬ ಗಂಟೆಯವರೆಗೆ ಅಭ್ಯರ್ಥಿಗಳಿಗೆ ನೋಂದಣಿಗಾಗಿ ವೆಬ್ ಸೈಟ್ ಲಭ್ಯವಿದ್ದು, ನೋಂದಾಯಿತ ಅಭ್ಯರ್ಥಿಗಳಿಗೆ ದಿನಾಂಕ, ಸಮಯ ಹಾಗೂ ವರ್ಚುಯಲ್ ಲಿಂಕನ್ನು ಎಸ್.ಎಂ.ಎಸ್ ಅಥವಾ ಕರೆ ಮುಖಾಂತರ ತಿಳಿಸಲಾಗುವುದು.
ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಈ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಯಾದ Grassroots BPO Pvt.Ltd, ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೇಲ್ಕಂಡ ವೆಬ್ ಸೈಟಿಗೆ ಭೇಟಿ ನೀಡಬಹುದಾಗಿದೆ ಎಂದು ಬೆಳಗಾವಿಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ಸಿಎಂ; ಹೊಸ ಸಂಪುಟ; ಯಾರ್ಯಾರು ಔಟ್? ಯಾರ್ಯಾರು ಇನ್…?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ