Latest

ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ಶ್ರೀಗಳನ್ನು ಇಂದು ಪೊಲೀಸರು ಚಿತ್ರದುರ್ಗ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 21ರವರೆಗೆ ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.

ಮುರುಘಾಶ್ರೀಗಳಿಗೆ ಜಾಮೀನು ನೀಡಲು ನಿರಾಕರಿಸಿರುವ ನ್ಯಾಯಾಲಯ, ಜಾಮೀನು ಅರ್ಜಿಯನ್ನು ತಳ್ಳಿ ಹಾಕಿದೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀಗಳಿಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.

ಇದೇ ವೇಳೆ ಎರಡನೇ ಆರೋಪಿ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನವೂ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಕೆ ಎಸ್ ಆರ್ ಟಿಸಿ ಬಸ್-ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

https://pragati.taskdun.com/latest/ksrtc-buscaraccidenttwo-death/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button