Latest

ಸಮುದ್ರಕ್ಕೆ ನುಗ್ಗಿದ ಕಾರು; ಓರ್ವ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರು ಉರುಳಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಮುದ್ರಪಾಲಾಗಿದ್ದು, ಇಬ್ಬರನ್ನು ರಕ್ಷಿಸಿರುವ ಘಟನೆ ನಡೆದಿದೆ.

28 ವರ್ಷದ ವೀರಾಜ್ ಆಚಾರ್ಯ ಮೃತಪಟ್ಟಿದ್ದು, ವೇಗವಾಗಿ ಚಲಾಯಿಸಿಕೊಂಡು ಬರುತ್ತಿದ್ದ ಕಾರು ಸಮುದ್ರಕ್ಕೆ ನುಗ್ಗಿದೆ. ಸಮುದ್ರದ ಅಲೆಗಳ ರಭಸಕ್ಕೆ ಕಾರು ಕೊಚ್ಚಿ ಹೋಗಿದ್ದು, ನೀರು ಪಾಲಾದ ವೀರಾಜ್ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಒಟ್ಟು ಮೂವರು ಪ್ರಯಾಣಿಸುತ್ತಿದ್ದರು.

ಮೃತ ವೀರಾಜ್ ಕೋಟೇಶ್ವರ ಗ್ರಾಮದ ನಿವಾಸಿ. ಕಾರು ರಾಷ್ಟ್ರೀಯ ಹೆದ್ದಾರಿ 66 ರಿಂದ ಸಮುದ್ರಕ್ಕೆ ನುಗ್ಗಿ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಕಾರಿನಲ್ಲಿದ್ದ ಇಬ್ಬರನ್ನು ರಕ್ಷಿಸಿದ್ದಾರೆ.

Home add -Advt

Related Articles

Back to top button