Karnataka NewsLatestNational

*ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಒಂದೇ ಕುಟುಂಬದ ಐವರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಕಾರೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವದಹನವಾಗಿದ್ದಾರೆ.

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಈ ದುರಂತ ಸಂಭವಿಸಿದೆ. ಅಲ್ವಾರ್ ಜಿಲ್ಲೆಯ ಲಕ್ಷ್ಮಣ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮೌಜ್‌ಪುರ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಈಡೀ ಕಾರು ಹೊತ್ತಿ ಉರಿದಿದೆ. ಕಾರಿನಿಂದ ಹೊರಬರಲಾಗದೇ ಐವರು ಕಾರಿನಲ್ಲಿ ಸಜೀವದಹನವಾಗಿದ್ದಾರೆ.

Home add -Advt

ಮೃತರನ್ನು ಮಧ್ಯಪ್ರದೇಶದ ಶಿಯೋಪುರದವರು ಎಂದು ಗುರುತಿಸಲಾಗಿದ್ದು, ಇವರಲ್ಲಿ ಮೂವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದ್ದಾರೆ. ಕೋಟಾ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಾರು ಹೊತ್ತಿ ಉರಿದಿದೆ.

ಕಾರಿನ ಚಾಲಕ ವಿನೋದ್ ಕುಮಾರ್ ಮೆಹರ್ ವಾಹನದಿಂದ ಹೊರಕ್ಕೆ ಜಿಗಿದು ಬದುಕುಳಿದಿದ್ದರೂ, ಶೇ. 80ರಷ್ಟು ಸುಟ್ಟ ಗಾಯಗಳಾಗಿರುವುದರಿಂದ ಅವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button