Latest

*ಹಳ್ಳಕ್ಕೆ ಬಿದ್ದ ಕಾರಿನಲ್ಲಿ ಹೊತ್ತಿಕೊಂಡ ಬೆಂಕಿ; ಚಾಲಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಹಳ್ಳಕ್ಕೆ ಬಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಕಾರು ಚಾಲಕ ಸಜೀವವಾಗಿ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೊಲಪಲ್ಲಿ ಗ್ರಾಮದಲ್ಲಿ ನಡೆದಿದೆ.

ಇಬ್ರಾಹಿಂ (48) ಮೃತ ದುರ್ದೈವಿ. ವ್ಯಾಪಾರ ಮುಗಿಸಿಕೊಂಡು ಒಮಿನಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಗೋಪಲ್ಲಿ ಬಳಿ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು, ಏಕಏಕಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನ ಸಮೇತ ಚಾಲಕ ಸುಟ್ಟು ಹೋಗಿದ್ದಾರೆ.

ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Home add -Advt

Related Articles

Back to top button