*ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರು*

ಪ್ರಗತಿವಾಹಿನಿ ಸುದ್ದಿ: ಮಾರುತಿ ಕಾರೊಂದು ಇದ್ದಕ್ಕಿದ್ದಂತೆ ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಬೆಳಗಾವಿಯ ಬಾಗಲಕೋಟೆ ರಸ್ತೆಯಲ್ಲಿ ನಡೆದಿದೆ. ಯರಗಟ್ಟಿಯಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ಮಾರುತಿ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಸಾಂಬ್ರಾ ಬಳಿ ಬರುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರು ನ್ನಿಲ್ಲಿಸಿ ಕಾರಿನಲ್ಲಿದ್ದವರು ಇಳಿದಿದ್ದಾರೆ. ಅಷ್ಟರಲ್ಲೇ ಕಾರಿನಲ್ಲಿ ಬೆಂಕಿ ಉರಿಯಲಾರಂಭಿಸಿದ್ದು, ನೋಡ ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರಿದಿದೆ. ಸದ್ಯ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Home add -Advt *ಇದು … Continue reading *ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರು*