
ಪ್ರಗತಿವಾಹಿನಿ ಸುದ್ದಿ: ಕಾರ್ಗೋ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಚೆನ್ನೈನಲ್ಲಿ ನಡೆದಿದೆ.
ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಕೌಲಾಲಂಪುರದಿಂದ ಚಎನ್ನೈಗೆ ಬರುತ್ತಿದ್ದ ಕಾರ್ಗೋ ವಿಮಾನವು ಲ್ಯಾಂಡಿಂಗ್ ಆಗುತ್ತಿದ್ದಾಗ ಎಂಜಿಂನ್ ನಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ತಾಂತ್ರಿಕ ದೋಷವೇ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗಿದೆ. ವಿಮನದಲ್ಲಿದ್ದ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.