Belagavi NewsBelgaum News

*ಬೆಳಗಾವಿ: ಮತ್ತೊಂದು ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ, ನಾಗರಮುನ್ನೋಳಿ: ಕಾರು ಹಾಗೂ ಗೂಡ್ಸ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ನಾಗರಮುನ್ನೋಳಿ ಸಮೀಪದ ಬೆಳಕೂಡ ಗೇಟ್ ಬಳಿ ನಡೆದಿದೆ.

ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ರಾಕೇಶ ವಾಟಕರ್ (23), ಸೌರಭ ಕುಲಕರ್ಣೀ (22) ಎಂದು ಗುರುತಿಸಲಾಗಿದೆ.

Home add -Advt

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸ್ಥಳಕ್ಕೆ ಚಿಕ್ಕೋಡಿ ಡಿವೈಎಸ್ಪಿ ಗೋಪಾಲ ಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗಲಾ, ಪಿಎಸ್ಐ ರೂಪಾಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕೋಡಿ ಸಂಚಾರಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button