Karnataka NewsLatest

*ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕೆರೆಸೂರು ಬಳಿ ನಡೆದಿದೆ.

ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ ಸಾಬ್ (60), ಮೊಹಮ್ಮದ್ ಮುಸ್ತಫಾ (36) ಶೋಹೆಬ್ (6) ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಧಾರವಾಡ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಜಾಫರ್ ಸಾಬ್ ಕುಟುಂಬ ಪಾರ್ಶ್ವವಾಯು ಔಷಧಿ ತರಲೆಂದು ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಹಳಗಾ ಗ್ರಾಮದ ಸೆಂಟ್ ಮೇರಿ ಆಸ್ಪತ್ರೆಗೆ ಹೋಗಿದ್ದರು. ವಾಪಸ್ ಆಗುತ್ತಿದ್ದಾಗ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.


Related Articles

Back to top button