
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಕಾರಿನಲ್ಲಿದ್ದ ಶಂಶುದ್ದೀನ್ (40), ಮಲ್ಲಿಕಾ (37),ಖಲೀಲ್ (42), ತಬ್ರೇಜ್ (13) ಮೃತ ದುರ್ದೈವಿಗಳು. ಅಪಘಾತದಲ್ಲಿ ಮೃತಪಟ್ಟ ನಾಲ್ವರು ತುಮಕೂರು ಮೂಲದವರು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಹೊಸಪೇಟೆಯಿಂದ ತುಮಕೂರಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕಿ ಹೊಡೆದಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ