Kannada NewsKarnataka NewsLatest

*ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಶಿಗ್ಗಾವಿ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ 38 ವರ್ಷದ ಮನೋಹರ್ ಹಾಗೂ 23 ವರ್ಷದ ಪ್ರಿಯಾಂಕಾ ಸಾವನ್ನಪ್ಪಿದ್ದಾರೆ.

ಮೊನಾಲಿಸಾ ಎಂಬುವವರು ಗಾಯಗೊಂಡಿದ್ದು, ಗಾಯಾಳುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮನೋಹರ್ ಹಾಗೂ ಪ್ರಿಯಾಂಕಾ ಬೆಂಗಳೂರಿನ ಮೂಲದವರಾಗಿದ್ದು, ಮುಂಬೈನತ್ತ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button