
ಪ್ರಗತಿವಾಹಿನಿ ಸುದ್ದಿ: ಕಾರೊಂದು ಚರಂಡಿಗೆ ಬಿದ್ದ ಪರಿಣಾಮ 6 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಜಗನ್ನಾಥಪುರ ಗ್ರಾಮದಲ್ಲಿ ನಡೆದಿದೆ.
ಮದುವೆ ಕಾರ್ಯಕ್ರಮಕ್ಕೆ ಹೋಗಿ ಕಾರಿನಲ್ಲಿ ವಾಪಾಸ್ ಆಗುತ್ತಿದ್ದ ಕುಟುಂಬ ಚರಂಡಿ ಪಾಲಾಗಿದೆ. ಕಾರು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದು, 6 ಜನರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ.
ಮೃತರನ್ನು ದೇರಾಪುರ ಹಾಗೂ ಶಿವರಾಜಪುರ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಿಕಂದರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.