
ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರ ಜಿಲ್ಲೆಯ ಕೊಳೆಗಾಲ ತಾಲೂಕಿನಲ್ಲಿ ಸಂಭವಿಸಿದ ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಐವರು ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.
ಚಾಮರಾಜನಗರ ಎಸ್ ಪಿ ಡಾ.ಬಿ.ಟಿ.ಕವಿತಾ ಮಾಹಿತಿ ನಿಡಿದ್ದು, ಅಪಘಾತದಲ್ಲಿ ಮೃತಪಟ್ಟ ಐವರೂ ಕಾಲೇಜು ವಿದ್ಯಾರ್ಥಿಗಳು. ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಓರ್ವ ಡಿಪ್ಲೋಮಾ ವಿದ್ಯಾರ್ಥಿ. ಮೈಸೂರಿನ ಎಂಐಟಿ ಕಾಲೇಜಿನವರಾಗಿದ್ದಾರೆ.
ಶಿವರಾತ್ರಿ ಜಾತ್ರೆಗೆಂದು ಮಲೈಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಮೃತರಲ್ಲಿ ಶ್ರೀಲಕ್ಷ್ಮೀ ಎಂಬ ವಿದ್ಯಾರ್ಥಿ ಪೋಷಕರು ಕೊಳ್ಳೆಗಾಲ ಮೂಲದವರಾಗಿದ್ದು, ಮಗಳ ಶಿಕ್ಷಣಕ್ಕೆಂದೇ ಮೈಸೂರಿನಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು ಎಂದು ತಿಳಿಸಿದ್ದಾರೆ.
ಟಿಪ್ಪರ್ ಲಾರಿ ಚಾಲಕನಿಗಾಗಿ ಶೋಧ ನಡೆಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ