Kannada NewsKarnataka NewsLatest

*ಟೈರ್ ಸ್ಫೋಟಗೊಂಡು ಪಲ್ಟಿಯಾಗಿ ಬಿದ್ದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡ ಪರಿನಾಮ ಕಾರು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಕತ್ರಾಳ್ ಕೆರೆ ಬಳಿ ನಡೆದಿದೆ.

ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಕತ್ರಾಳ್ ಕೆರೆ ಬಳಿ ಟೈರ್ ಸ್ಫೋಟಗೊಂಡು ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಮೃತರನ್ನು ಮುತ್ತುಸ್ವಾಮಿ (69) ಹಾಗೂ ಪಾಂಡುರಂಗ (32) ಎಂದು ಗುರುತಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Related Articles

Back to top button