ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. ಟ್ರಕ್ ಹಾಗೂ ಕಾರಿನ ನಡುವೆ ಅಪಘಾತಸಂಭವಿಸಿದ್ದು, ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದಾರೆ.
ಛತ್ತೀಸ್ ಗಢದ ಬಲೋದ್ ಜಿಲ್ಲೆಯ ಭಾನುಪ್ರತಾಪಪುರ-ದಳ್ಳಿರಾಜರ ರಸ್ತೆಯ ಚೌರಪಾವಡ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಜನಂದಗಢ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ