
ಪ್ರಗತಿವಾಹಿನಿ ಸುದ್ದಿ: ಬೇಸಿಗೆಯ ಧಗೆಯ ನಡುವೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸುರಿಯುತ್ತಿದ್ದು ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದೆ.
ಈ ವಾರ ಪೂರ್ತಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮೂರು ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ.
ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.