ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಮಹಾನವಮಿ ಹಿನ್ನೆಲೆಯಲ್ಲಿ ದುರ್ಗಾಮಾತಾ ದೌಡ್ ಮೆರವಣಿಗೆ ಹೋಗುತ್ತಿರುವಾಗ ಪ್ರಾರ್ಥನಾ ಮಂದಿರ ಮೇಲೆ ಭಗವಾ ಧ್ವಜ ಹಾರಿಸಿದ ಫೋಟೊ ಎಡಿಟ್ ಮಾಡಿ ಅದನ್ನು ಮೊಬೈಲ್ನಲ್ಲಿ ಸ್ಟೇಟಸ್ ಇಟ್ಟಿದ್ದ ಎಂಟು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ಕರೋಶಿ ಗ್ರಾಮದಲ್ಲಿ ಮಂಗಳವಾರ ದುರ್ಗಾಮಾತಾ ದೌಡ್ ಹೋಗುತ್ತಿದ್ದಾಗ ಅಲ್ಲಿನ ಪ್ರಾರ್ಥನಾ ಮಂದಿರದ ಹತ್ತಿರ ಕೆಲವರು ಫೋಟೊ ತೆಗೆದು ಪ್ರಾರ್ಥನಾ ಮಂದಿರದ ಮೇಲೆ ಭಗವಾ ಧ್ವಜ ಹಾರಿಸಿದ ಫೋಟೊ ಎಡಿಟ್ ಮಾಡಿ ಮೊಬೈಲ್ನಲ್ಲಿ ಸ್ಟೇಟಸ್ ಇಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ತಡ ರಾತ್ರಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಅನ್ಯ ಧರ್ಮದವರ ನಿಂದನೆ ಮಾಡಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಕುರಿತು ಕೆಲ ಕಾಲ ಕರೋಶಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೆಟ್ಟಿ ನೀಡಿ ಪರಿಶೀಲನೆ ನಡೆಸಿ ಎರಡು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಿ ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಜನರಲ್ಲಿ ಮನವಿ ಮಾಡಿದರು.
ಶಾಲೆಗಳ ದಸರಾ ರಜೆ ವಿಸ್ತರಣೆಗೆ ಶನಿವಾರ CM ಸಹಿ ಹಾಕ್ತಾರಾ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ