Karnataka News

*ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಪ್ರಾಂಶುಪಾಲ ಸೇರಿ ಇಬ್ಬರು ವಜಾ*

ಪ್ರಗತಿವಾಹಿನಿ ಸುದ್ದಿ : ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿದ್ದು, ಬೀದರ್ ನ ಸಾಯಿ ಸ್ಪೂರ್ತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮತ್ತು ಎಸ್‌ಡಿಎ ಸಿಬ್ಬಂದಿಯನ್ನು ಕೆಲಸದಿಂದಲೇ ವಜಾ ಮಾಡಲಾಗಿದೆ.

ಬೀದ‌ರ್ ಜಿಲ್ಲಾಧಿಕಾರಿಗಳು ಪ್ರಾಂಶುಪಾಲ ಚಂದ್ರಶೇಖರ್ ಬಿರಾದರ್ ಮತ್ತು ಎಸ್‌ಡಿಎ ಸತೀಶ ಪವಾರ್‌ ಅವರನ್ನು ಅಮಾನತು ಮಾಡುವಂತೆ ಸೂಚಿಸಿದ್ದರು. ಡಿಸಿಯಿಂದ ಆದೇಶ ಬಂದ ಬೆನ್ನಲ್ಲೇ ಕಾಲೇಜು ಆಡಳಿತ ಮಂಡಳಿ ಇಬ್ಬರನ್ನು ಕೆಲಸದಿಂದ ವಜಾ ಮಾಡಿದೆ.

ಖಾಸಗಿ ಕಾಲೇಜು ಆಗಿರುವ ಕಾರಣ ಶಾಲಾ ಆಡಳಿತ ಮಂಡಳಿಗೆ ಶಿಸ್ತು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಸೂಚಿಸಿತ್ತು. ಶಿವಮೊಗ್ಗದಲ್ಲಿ ಜನಿವಾರ ತೆಗೆಸಿದ ಪ್ರಕರಣ ಹಾಗೂ ಬೀದರ್ ನಲ್ಲಿ ಜನಿವಾರ ತೆಗೆಯದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ. ಅಲ್ಲದೇ ಬೀದರ್ ನಲ್ಲೂ ಬ್ರಾಹ್ಮಣ ಸಮುದಾಯ ಘಟನೆಯನ್ನು ವ್ಯಾಪಕವಾಗಿ ಖಂಡಿಸಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button