Latest

ಚಾಲೇಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಪ್ರಕರಣ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ.

ಆರ್.ಆರ್.ನಗರ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ನಟ ದರ್ಶನ್, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚುನಾವಣಾ ಪ್ರಚಾರ ನಡೆಸಿದ್ದರು. ಈ ವೇಳೆ ದರ್ಶನ್ ಸೇರಿದಂತೆ ಇತರ ನಾಯಕರು ಕೋವಿಡ್ ನಿಯಮವನ್ನು ಉಲ್ಲಂಘಿಸಿದ್ದಾರೆ. ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಪ್ರಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ನಟ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button