Latest

ಲೋಕಾಯುಕ್ತ ತನಿಖೆಯಿಂದ ಎಲ್ಲವೂ ಗೊತ್ತಾಗುತ್ತೆ ಎಂದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೀಪಾವಳಿ ಗಿಒಹ್ಟ್ ಜೊತೆ ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಯಾರಿಗೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಇದು ಕಾಂಗ್ರೆಸ್ ಟೂಲ್ ಕಿಟ್ ರಾಜಕಾರಣದ ಮುಂದುವರೆದ ಭಾಗ. ಕಾಂಗ್ರೆಸ್ ಪಕ್ಷ ಸುಳ್ಳನ್ನೇ ಸೃಷ್ಟಿ ಮಾಡುವ ಕೆಲಸ ಮಾಡುತ್ತಾ ಬಂದಿದೆ. ನಾನು ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ಯಾರಿಗೂ ಹೇಳಿಲ್ಲ. ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ ಎಂದರು.

Home add -Advt

ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಐಫೋನ್, ಚಿನ್ನದ ನಾಣ್ಯ ನೀಡಿದ್ದರು. ಈಗ ನಮ್ಮ ವಿರುದ್ಧ ಆರೋಪ ಮಾಡಲು ಕಾಂಗ್ರೆಸ್ ಗೆ ಯಾವ ನೈತಿಕತೆ ಇದೆ? ಪತ್ರಕರ್ತರಿಗೆ ಹಣ ನೀಡಿದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.

ಮತ್ತೆ ಭಾರಿ ಮಳೆ ಎಚ್ಚರಿಕೆ; ಯೆಲ್ಲೋ ಅಲರ್ಟ್ ಘೋಷಣೆ

https://pragati.taskdun.com/latest/heavy-rainkarnatakaimd-2/

Related Articles

Back to top button