Film & Entertainment

*ನಟ ಮಯೂರ್ ಪಟೇಲ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ನಟ ಮಯೂರ್ ಪಟೇಲ್ ವಿರುದ್ಧ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಶಾಲಿನಿ ಎಂಬ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ನಟ ಮಯೂರ್ ಪಟೇಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ ಅತಿಕ್ರಮ ಪ್ರವೇಶ ಮಾಡಿರುವ ಆರೋಪ ಮಯೂರ್ ಪಟೇಲ್ ವಿರುದ್ಧ ಕೇಳಿಬಂದಿದೆ. ಮಯೂರ್ ಪಟೇಲ್ ರೌಡಿಗಳೊಂದಿಗೆ ಬಂದು ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Related Articles

Back to top button