
ನಳೆ ನಡೆಯಲಿರುವ ಸಚಿವರ ಸಭೆಯಲ್ಲಿ ತೀರ್ಮಾನ
ಪ್ರಗತಿವಾಹಿನಿ ಸುದ್ದಿ: ಜಾತಿಗಣತಿ ವರದಿ ಜಾರಿ ಬಗ್ಗೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಸಾಕಷ್ಟು ಕುತೂಹಲ ಮೂಡಿಸಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಇಂದು ನೀಡಿರುವ ಹೇಳಿಕೆಯೊಂದು ಅಚ್ಚರಿಗೆ ಕಾರಣವಾಗಿದೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅದು ನಿಜವಾಗಿಯೂ ಜಾತಿಗಣತಿ ವರದಿ ಅಲ್ಲ ಎಂದು ತಿಳಿಸಿದ್ದಾರೆ. ಜಾತಿಗಣತಿ ಬಗ್ಗೆ ನಾಳೆ ಸಭೆ ಕರೆಯಲಾಗಿದೆ. ಸಭೆಯಲ್ಲಿ ಎಲ್ಲಾ ಸಚಿವರ ಅಭಿಪ್ರಾಯ ಸಂಘ್ರಹಿಸಲಾಗುವುದು ಎಂದರು.
ನಿಜವಾಗಿಯೂ ಅದು ಜಾತಿಗಣತಿಯೇ ಅಲ್ಲ. ಅದು ಸಾಮಾಜಿಕ, ಆರ್ಥಿಕ ಸಮೀಕ್ಷೆ ಅಷ್ಟೇ. ಅನಗತ್ಯವಾಗಿ ಗೊಂದಲಗಳು ಬೇಡ ಎಂದು ಹೇಳಿದರು. ನಾಳೆ ಸಚಿವರ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈಗಾಗಲೇ ಹಲವು ಸಮಾಜಗಳ ಮುಖಂಡರು ಜಾತಿಗಣತಿ ವರದಿ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು, ಜಾರ್ ಮಾಡಿದರೆ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಕಾಂಗ್ರೆಸ್ ಶಾಸಕರು, ಸಚಿವರಿಂದಲೇ ಜಾತಿಗಣಿ ಬಗ್ಗೆ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ.