Politics

*ಜಾತಿಗಣತಿ ವರದಿ ಜಾರಿ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಜಾತಿಗಣತಿ ಜಾರಿ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಜಯನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿಗಳ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು.

ಇದೇ ವೇಳೆ ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಸಿಎಂ ಸಿದ್ದರಾಮಯ್ಯ, ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

Home add -Advt

ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ , ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button