Politics

*ಜಾತಿಗಣತಿ ವರದಿ ಈಗಲೇ ಚರ್ಚಿಸುವುದು ಸಾಧುವಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜಾತಿಗಣತಿ ವರದಿ ಕುರಿತು ಈಗಲೇ ಚರ್ಚೆ ಸಾಧುವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಏಪ್ರಿಲ್ 17 ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಲಿದೆ. ತದನಂತರವಷ್ಟೇ ಅದರ ಸಾಧಕ ಬಾಧಕದ ಬಗ್ಗೆ ಚರ್ಚೆ ಮಾಡಿದರೆ ಸೂಕ್ತ ಎಂದು ತಿಳಿಸಿದರು.

ವೀರಶೈವ ಲಿಂಗಾಯತರಲ್ಲಿ 103 ಉಪ ಪಂಗಡಗಳಿವೆ. ಅದರಲ್ಲಿ ಯಾವುದೇ ಪಂಗಡಗಳಿಗೂ ಅನ್ಯಾಯವಾಗದಂತೆ ಕ್ರಮವಹಿಸಲಾಗುವುದು. ಅನ್ಯ ಸಮುದಾಯಗಳ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಸಚಿವರು ಹೇಳಿದರು.

Home add -Advt

Related Articles

Back to top button