
ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ- ಜಾತಿ ಗಣತಿ ಸರ್ವೆ ಕಾರ್ಯಕ್ಕೆ ಗೈರಾಗಿದ್ದ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.
ಜಾತಿ ಗಣತಿಗೆ ಗೈರಾಗಿದ್ದ ಮೂವರು ಸಿಬ್ಬಂದಿಗಳನ್ನು ದಾವಣಗೆರೆ ಜಿಲ್ಲಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಜಾಮಾಪುರ ಪ್ರಾಥಮಿಕ ಶಾಲೆ ಶಿಕ್ಷಕ ಡಿ.ಕೆ.ಮಂಜುನಾಥ್, ನಾಗನೂರಿನ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಹೆಚ್.ಬಸವರಾಜಪ್ಪ ಹಾಗೂ ಓರ್ವ ಹಾಸ್ಟೆಲ್ ವಾರ್ಡನ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.