Latest

ದುಬಾರಿ ಬೆಕ್ಕು ಕಳ್ಳತನ; ಹುಡಿಕಿಕೊಟ್ಟವರಿಗೆ 35,000 ಘೋಷಿಸಿದ ಮಾಲೀಕ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದುಬಾರಿ ಬೆಲೆಯ ಪರ್ಷಿಯನ್ ಬೆಕ್ಕು ಕಳ್ಳತನವಾಗಿದೆ ಎಂದು ಬೆಕ್ಕಿನ ಮಾಲೀಕರು ಬೆಂಗಳೂರಿನ ತಿಲಕನಗರ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಬೆಂಗಳೂರಿನ ಜಯನಗರದ ರಾಜಣ್ಣ ಲೇಔಟ್ ನಿವಾಸಿ ಮಿಸ್ಬಾ ಶರೀಫ್ ಬೆಕ್ಕು ಕಳ್ಳತನವಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಜನವರಿ 15ರಿಂದ ಬೆಕ್ಕು ನಾಪತ್ತೆಯಾಗಿದ್ದು, ದುಷ್ಕರ್ಮಿಗಳು ಮನೆ ಮೇಲ್ಛಾವಣಿಯಿಂದ ಬಂದು ಬೆಕ್ಕನ್ನು ಕದ್ದೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ಬೆಕ್ಕನ್ನು ಹುಡುಕಿಕೊಟ್ಟವರಿಗೆ ಬರೋಬ್ಬರಿ 35,000 ರೂಪಾಯಿ ಕೊಡುವುದಾಗಿ ಮಿಸ್ಬಾ ಶರೀಫ್ ಪ್ರಕಟಣೆಯಲ್ಲಿ ಹೊರಡಿಸಿದ್ದಾರೆ.
ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button