Belagavi NewsBelgaum NewsKannada NewsKarnataka NewsNational

*ಮೂರು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ : ಬಿಸಿಲಿನಿಂದಾಗಿ ಈಗಾಗಲೇ ಇಡೀ ರಾಜ್ಯವೇ ತತ್ತರಿಸಿ ಹೋಗಿದ್ದು ಯವಾಗಪ್ಪ ಮಳೆ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ. ಈ ಬೆನ್ನಲ್ಲೇ ಮಾರ್ಚ್ 12 ರಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾದ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆಯ ಪ್ರಕಾರ, ಬಂಗಾಳಕೊಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದ್ದು ಈ ಹಿನ್ನಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾದ್ಯತೆ ಇದೆ ಎಂದು ವರದಿಯಾಗಿದೆ.

Home add -Advt

ಇನ್ನು ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದ‌ರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಮಾರ್ಚ್ 12 ರಿಂದ 14 ರವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಹಗಲು ಮಳೆಯ ಸಾಧ್ಯತೆ. ಉತ್ತರ ಕರ್ನಾಟಕದ ಶಾಖ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button