Karnataka News

*ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ: ಸಾರ್ವಜನಿಕರು, ಭಕ್ತರಿಗೆ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ: ಚಾಮುಂಡಿ ಬೆಟ್ಟ ಹಾಗೂ ಸುತ್ತಮುತ್ತಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಹಿಷ ದಸರಾ ಆಚರಣೆ ಸಮಿತಿ ಇಂದು ಮಹಿಷ ದಸರಾ ಆಚರಣೆಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Home add -Advt

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿ ತಾಯಿ ದರ್ಶನಕ್ಕೂ ನಿರ್ಬಂದ ಹಾಕಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಮಹಿಷ ದಸರಾ ಸಮಿತಿ ಇಂದು ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನಿಗೆ ಪುಷ್ಪಾರ್ಚನೆ ಮಾಡಲಿದೆ ಬಳಿಕ ಪುರಭವನದ ಹೊರ ಆವರಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಮೆರವಣಿಗೆ, ಬೈಕ್ ರ್ಯಾಲಿ, ಪಟಾಕಿ ಸಿಡಿಸುವುದು, ಘೋಷಣೆಗಳನ್ನು ಕೂಗುವಂತಿಲ್ಲ. ನಿಷೇಧಾಜ್ಞೆ ಜಾರಿ ಮಾಡಲಾಗಿದೆ.


Related Articles

Back to top button