Latest

*ಬಸವಜಯ ಮೃತ್ಯುಂಜಯ ಸ್ವಾಮೀಜಿಯವರಿಗೆ ಬೆದರಿಕೆ; ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಿದ್ದ ನಾಯಕರಿಂದಲೇ ಕೃತ್ಯ; ಶಾಸಕ ಅರವಿಂದ್ ಬೆಲ್ಲದ್ ಆರೋಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮಿಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸಿದ್ದ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಧಮ್ಕಿ ಹಾಕಿ ಬೆದರಿಕೆಯೊಡ್ದುತ್ತಿದ್ದಾರೆ ಎಂದು ಎಂದು ಶಾಸಕ ಅರವಿಂದ್ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಹೋರಾಟದಲ್ಲಿ ಭಾಗಿಯಾಗಿದ್ದ ಕೆಲ ರಾಜಕೀಯ ನಾಯಕರೇ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಈ ರೀತಿ ಧಮ್ಕಿ ಹಾಕಿದ್ದು ಯಾರು ಎಂಬುದು ನಮ್ಮ ಇಡೀ ಸಮುದಾಯಕ್ಕೆ ಗೊತ್ತಿದೆ. ಮತ್ತೆ ಧಮ್ಕಿ ಹಾಕಿದರೆ ಏನು ಮಾಡಬೇಕು ಎಂಬುದೂ ನಮಗೆ ಗೊತ್ತಿದೆ ಎಂದು ಎಚ್ಚರಿಸಿದ್ದಾರೆ.

ನಾವು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಿವ ಮೂಲಕ ಮೂಗಿಗೆ ತುಪ್ಪ ಸವರಿಲ್ಲ, ಈ ರೀತಿ ಕಾಂಗ್ರೆಸ್ ನಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಹೋರಾಟದಲ್ಲಿ ಭಾಗಿಯಾಗಿದ್ದ ಕೆಲ ನಾಯಕರೇ ಇಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಪರೋಕ್ಷವಾಗಿ ವಿಜಯಾನಂದ ಕಾಶಪ್ಪನವರ್ ಹಾಗೂ ವಿನಯ್ ಕುಲ್ಕರ್ಣಿ ವಿರುದ್ಧ ಬೆಲ್ಲದ್ ಆರೋಪ ಮಾಡಿದ್ದಾರೆ.

https://pragati.taskdun.com/police-security-for-panchmasali-shri/


Related Articles

Back to top button