Karnataka News

*ಕಾಶ್ಮೀರದಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಬಂದಿಳಿದ 178 ಕನ್ನಡಿಗರು*

ಪ್ರಗತಿವಾಹಿನಿ ಸುದ್ದಿ : ಪಹಲ್ಗಾಮ್ ನಲ್ಲಿ ಉಗ್ರರಿಂದ ನಡೆದ ಹತ್ಯಾಕಾಂಡದಲ್ಲಿ ಮೂವರು ಕನ್ನಡಿಗರು ಸೇರಿದಂತೆ ಒಟ್ಟು 28 ಜನ ಸಾವನ್ನಪ್ಪಿದ್ದು, ಇದೀಗ ಪ್ರವಾಸಕ್ಕೆಂದು ಕಾಶ್ಮೀರಕ್ಕೆ ಹೋಗಿದ್ದ 178 ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುತ್ತಿದ್ದು ಇಂದು ಮಧ್ಯಾಹ್ನ ತಾಯ್ತಾಡಿಗೆ ಬಂದಿಳಿದಿದ್ದಾರೆ.

ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿರುವ ಸುದ್ದಿ ತಿಳಿಯುತ್ತಿದ್ದಂತೆ ಸಚಿವ ಸಂತೋಷ್ ಲಾಡ್ ಹಾಗೂ ತೇಜಸ್ವಿ ಸೂರ್ಯ ಅವರು ಜಮ್ಮು ಕಾಶ್ಮೀರಕ್ಕೆ ತೆರಳಿ ಕನ್ನಡಿಗರ ರಕ್ಷಣೆಗೆ ಮುಂದಾಗಿದ್ದಾರೆ. ಅಲ್ಲದೇ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ.

Home add -Advt

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತಿಳಿಸಿದ್ದು ಸಚಿವ ಸಂತೋಷ್ ಲಾಡ್ ಹಾಗೂ 178 ಜನ ಕನ್ನಡಿಗರನ್ನು ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 12 ಗಂಟೆಗೆ ತಾಯ್ನಾಡಿಗೆ ಬಂದಿಳಿದಿದ್ದಾರೆ.

ಕಾಶ್ಮೀರದಿಂದ ವಿಶೇಶ ವಿಮಾನದಲ್ಲಿ 178 ಕನ್ನಡಿಗರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

Related Articles

Back to top button