Kannada NewsKarnataka NewsLatestPolitics

*ಸುದೀರ್ಘ ಮೂರುವರೆ ಗಂಟೆಗಳ ಕಾಲ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಮಂಡಲ ಅಧಿವೇಶನದಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಸುದೀರ್ಘವಾಗಿ ಬಜೆಟ್ ಓದುವ ಮೂಲಕ ಗಮನ ಸೆಳೆದರು.

ವಿಧಾನಸಭೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡಿಸಿದ್ದು, ಸುದೀರ್ಘವಾಗಿ ಮೂರುವರೆಗಂಟೆಗಳ ಕಾಲ ನಿರರ್ಗಳವಾಗಿ ಬಜೆಟ್ ಮಂಡಿಸಿದ್ದು ವಿಶೇಷವಾಗಿತ್ತು.

Home add -Advt

ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ನೀರನ್ನು ಕೂಡ ಕುಡಿಯದೇ ನಿಂತ ಜಾಗದಿಂದ ಕೊಂಚವೂ ಕದಲದೇ ನಿರಂತರ ಮೂರುವರೆ ಗಂಟೆಗಳ ಕಾಲ ನಿರಾಯಾಸವಾಗಿ ಬಜೆಟ್ ಮಂಡಿಸಿ ಎಲ್ಲರ ಗಮನ ಸೆಳೆದರು. ಇನ್ನು ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ಎಂದಿನಂತೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದರೆ. ಉಳಿದಂತೆ ಬುದ್ದಿವಂತಿಕೆ ಹಾಗೂ ಉತ್ತಮ ಬಜೆಟ್ ಮಂಡಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.


Related Articles

Back to top button